ಸರ್ಕಾರಿ ವೈದ್ಯರೊಬ್ಬರು ಹಾಡಹಗಲೇ ಕಂಠಪೂರ್ತಿ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತಿಪಟೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಂತವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಜಯಪ್ರಕಾಶ್, ಸೋಮವಾರ ಮಧ್ಯಾಹ್ನ ಮದ್ಯ ಸೇವಿಸಿ ಬಂದಿದ್ದು ಟೇಬಲ್ ಮೇಲೆ ಕಾಲಿಟ್ಟು ಮಲಗಿದ್ದಾರೆ.
ಈ ವೇಳೆ ಅವರನ್ನು ಮಾತನಾಡಲು ಪ್ರಯತ್ನಿಸಿದ ರೋಗಿಗಳಿಗೆ ಹೊರ ಹೋಗುವಂತೆ ಜಯಪ್ರಕಾಶ್ ಹೇಳಿದ್ದು, ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ಹಿಂದೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯ ಜಯಪ್ರಕಾಶ್ ಕಾರ್ಯನಿರ್ವಹಿಸುತ್ತಿದ್ದಾಗ ಮದ್ಯಪಾನ ಮಾಡಿಕೊಂಡು ಬಂದ ಆರೋಪದ ಮೇಲೆ ಅಮಾನತುಗೊಂಡಿದ್ದರು ಎನ್ನಲಾಗಿದೆ. ಇದೀಗ ಇಲ್ಲಿಯೂ ತಮ್ಮ ವರ್ತನೆಯನ್ನು ಮುಂದುವರಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.