ಹೊಸಪೇಟೆ: ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ದುಗ್ಗಾವತಿ ಗ್ರಾಮದ ದುಗ್ಗಮ್ಮದೇವಿ ಜಾತ್ರೆಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂಕಪ್ಪನವರ ಹನುಮಂತ ಎಂಬಾತ 25 ವರ್ಷದ ಪ್ರತಿಭಾ ನಾಗರಾಜ್ ಅವರನ್ನು ಕೊಲೆ ಮಾಡಿದ್ದಾನೆ. ಆರೋಪಿ ಮೂಕಪ್ಪನವರ ಹನುಮಂತನನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.