ಪಾಕಿಸ್ತಾನದ ಲಾಹೋರ್ ನಲ್ಲಿ ಹೋಳಿ ಆಚರಣೆ ಮಾಡುತ್ತಿದ್ದ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಸೋಮವಾರದಂದು ಲಾಹೋರಿನ ಪಂಜಾಬ್ ಯೂನಿವರ್ಸಿಟಿಯಲ್ಲಿ ಈ ಘಟನೆ ನಡೆದಿದೆ.
15 ಮಂದಿ ಹಿಂದೂ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಹೋಳಿ ಆಚರಣೆ ಮಾಡುತ್ತಿದ್ದ ವೇಳೆ ದೊಡ್ಡ ಸಂಖ್ಯೆಯಲ್ಲಿ ಬಂದ ಗುಂಪೊಂದು ಅವರುಗಳ ಮೇಲೆ ಹಲ್ಲೆ ಮಾಡಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಾಕಿಸ್ತಾನದಲ್ಲಿ 22 ಲಕ್ಷಕ್ಕೂ ಅಧಿಕ ಹಿಂದೂಗಳು ನೆಲೆಸಿದ್ದು, ಒಟ್ಟು ಜನಸಂಖ್ಯೆಯಲ್ಲಿ ಶೇಕಡ 1.18 ರಷ್ಟು ಇರುವ ಇವರುಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ ಪಾಕಿಸ್ತಾನದ ಮಾನವ ಹಕ್ಕುಗಳ ಹೋರಾಟಗಾರರು ಈ ಹಿಂದೆ ಆರೋಪಿಸಿದ್ದರು. ಇದರ ಮಧ್ಯೆಯೂ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ.