ಗ್ರಾಮ ಸುರಕ್ಷಾ ಯೋಜನೆಯಡಿ ದಿನಕ್ಕೆ 50 ರೂ. ಉಳಿಸಿ ಪಡೆಯಿರಿ 35 ಲಕ್ಷ ರೂಪಾಯಿ

ಪೋಸ್ಟ್ ಆಫೀಸ್ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಹೂಡಿಕೆದಾರರು ಹೆಚ್ಚಿನ ಬಡ್ಡಿದರಗಳು ಮತ್ತು ತೆರಿಗೆ ವಿನಾಯಿತಿಗಳ ಲಾಭವನ್ನು ಪಡೆಯಬಹುದು. ಅಂಚೆ ಕಚೇರಿಯ ಗ್ರಾಮೀಣ ಅಂಚೆ ಜೀವ ವಿಮಾ ಯೋಜನೆಗಳ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಇವುಗಳಲ್ಲಿ ಗ್ರಾಮ ಸುರಕ್ಷಾ ಯೋಜನೆಯೂ ಸೇರಿದೆ.

ಈ ಯೋಜನೆಯಲ್ಲಿ ನೀವು ದಿನಕ್ಕೆ 50 ರೂಪಾಯಿಗಳನ್ನು ಹೂಡಿಕೆ ಮಾಡಬೇಕು. ಅಂದರೆ ತಿಂಗಳಿಗೆ 1,500 ರೂಪಾಯಿ ಠೇವಣಿ ಇಟ್ಟರೆ 35 ಲಕ್ಷ ರೂಪಾಯಿ ಪಡೆಯಬಹುದು. ಹೂಡಿಕೆದಾರರು 80ನೇ ವಯಸ್ಸಿನಲ್ಲಿ ಈ ಮೊತ್ತವನ್ನು ಮರಳಿ ಪಡೆಯುತ್ತಾರೆ. ಈ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಪರಿಚಯಿಸಲಾಗಿದ್ದು, ನಾಗರಿಕರು ಈ ಯೋಜನೆಯನ್ನು ಪಡೆದುಕೊಳ್ಳಬಹುದು.

ಭಾರತದ ನಾಗರಿಕರು ಈ ಯೋಜನೆಯಲ್ಲಿ 19ರಿಂದ 55 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಇದರಲ್ಲಿ ಕನಿಷ್ಠ ರೂ.10,000 ಮತ್ತು ಗರಿಷ್ಠ ರೂ.10,00,000 ಹೂಡಿಕೆ ಮಾಡಬಹುದು. ಇದಕ್ಕಿಂತ ಮುಖ್ಯವಾಗಿ ಪ್ರೀಮಿಯಂ ಪಾವತಿಸಲು ಹಲವು ಆಯ್ಕೆಗಳಿವೆ. ಈ ಯೋಜನೆಯಲ್ಲಿ ನೀವು ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಅಥವಾ ವಾರ್ಷಿಕವಾಗಿ ಕಂತು ಪಾವತಿಸಬಹುದು. 80ನೇ ವಯಸ್ಸಿನಲ್ಲಿ ಈ ಮೊತ್ತವನ್ನು ಮರಳಿ ಪಡೆಯುತ್ತಾರೆ. ಈ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಪರಿಚಯಸಲಾಗಿದ್ದು, ನಾಗರಿಕರು ಈ ಯೋಜನೆಯನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಸಮೀಪದ ಅಂಚೆ ಕಛೇರಿಗೆ ಭೇಟಿ ನೀಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read