ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶ ಪಡೆಯಲು ಬಯಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಬಯಸಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದು ಇಲ್ಲಿದೆ. 2022-23 ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತರ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಮಾರ್ಚ್ 31 ಅಂತಿಮ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ ಏಕಕಾಲದಲ್ಲಿ ಎರಡು ಕೋರ್ಸ್ ವ್ಯಾಸಂಗ ಮಾಡುವ ಅವಕಾಶವೂ ಲಭ್ಯವಿದ್ದು, ಈ ಪೈಕಿ ಒಂದು ಪದವಿ ಸಾಂಪ್ರದಾಯಿಕ ಮತ್ತೊಂದನ್ನು ದೂರ ಶಿಕ್ಷಣದ ಮೂಲಕ ಅಧ್ಯಯನ ಮಾಡಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಶೇಕಡ 15ರಷ್ಟು ಶುಲ್ಕ ವಿನಾಯಿತಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗೆ www.ksoumysuru.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ 9741197921 ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read