
ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಸಾರಿಗೆ ನೌಕರರ ಮನವೊಲಿಕೆಗೆ ಮುಂದಾಗಿದ್ದು, ಇಂದು ಸಂಜೆ 6:30ಕ್ಕೆ ಸಾರಿಗೆ ಮುಖಂಡರ ಸಭೆ ನಡೆಸಲಿದ್ದಾರೆ.
ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ 313ರಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಖಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕರ ಮಹಾಮಂಡಳಿ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರರ ವೇದಿಕೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

