
ಸಚಿವ.ವಿ.ಸೋಮಣ್ಣ ಹಾಗೂ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಯಾದಗಿರಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಯಡಿಯೂರಪ್ಪ, ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆ ಎಂಬುದರಲ್ಲಿ ಯಾವುದೇ ಹುರುಳಿಲ್ಲ. ಬೆಂಗಳೂರಿಗೆ ಹೋದ ಬಳಿಕ ಎಲ್ಲರನ್ನೂ ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಎಲ್ಲರೂ ನಮ್ಮ ಜೊತೆಯೇ ಇದ್ದಾರೆ. ಸಚಿವ ಸೋಮಣ್ಣ ಸೇರಿದಂತೆ ಯಾರೂ ಕೂಡ ಬಿಜೆಪಿ ಬಿಡುವುದಿಲ್ಲ. ಯಾರಿಗೂ ಯಾವುದೇ ಅಸಮಾಧಾನಗಳೂ ಇಲ್ಲ. ನೂರಕ್ಕೆ ನೂರರಷ್ಟು ವಿಶ್ವಾಸದಿಂದ ಕೆಲಸ ಮಾಡಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಿದೆ ಎಂದು ತಿಳಿಸಿದ್ದಾರೆ.

