HomeKarnatakaBIG NEWS: ಇದೇನಾ ಬಿಜೆಪಿ ಸಿದ್ಧಾಂತ.....? ಡಿ.ಕೆ.ಶಿವಕುಮಾರ್ ವಾಗ್ದಾಳಿ

BIG NEWS: ಇದೇನಾ ಬಿಜೆಪಿ ಸಿದ್ಧಾಂತ…..? ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಗುತ್ತಿದ್ದಂತೆಯೇ ಚನ್ನಗಿರಿಯಲ್ಲಿ ಬೃಹತ್ ಮೆರವಣಿಗೆ ಮಾಡಿರುವುದು ಅಚ್ಚರಿ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೋರ್ಟ್ ಎಸಿಬಿ ರದ್ದುಗೊಳಿಸಿದೆ. ಬಿಜೆಪಿ ಲೋಕಾಯುಕ್ತಕ್ಕೆ ಶಕ್ತಿ ನೀಡಿಲ್ಲ, ಬದಲಾಗಿ ಶಕ್ತಿ ಕುಂದಿಸುತ್ತಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದರೂ ಚನ್ನಗಿರಿಯಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಇದೇನಾ ಬಿಜೆಪಿ ಸಿದ್ಧಾಂತ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ಧಾಂತದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಈ ಬಗ್ಗೆ ಉತ್ತರ ಕೊಡಬೇಕು. ಸಮರ್ಥನೆ ಮಾಡಿಕೊಂಡಿದ್ದ ಬಿಜೆಪಿ ನಾಯಕರು ಈಗ ಮಾತನಾಡಲಿ ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular