HomeIndiaBIG NEWS: ನೌಕಾಪಡೆ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿಗಳ ರಕ್ಷಣೆ

BIG NEWS: ನೌಕಾಪಡೆ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿಗಳ ರಕ್ಷಣೆ

ಮುಂಬೈ: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಮುಂಬೈ ಕರಾವಳಿಯಲ್ಲಿ ಪತನಗೊಂಡಿದೆ.

ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಮುಂಬೈ ಕರಾವಳಿಯಲ್ಲಿ ಅಪಘಾತಕ್ಕೀಡಾಗಿದೆ. ದಿನ ನಿತ್ಯದಂತೆ ವಿಹಾರದಲ್ಲಿದ್ದಾಗ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪತನಗೊಂಡಿದೆ.

ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ. ನೌಕಾಪಡೆಯ ALH ಲಘು ಹೆಲಿಕಾಪ್ಟರ್ ಆಗಿದ್ದು ಮುಂಬೈ ಕರಾವಳಿ ತೀರಕ್ಕೆ ಬರುತ್ತಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡು ಅಪಘಾತಕ್ಕೀಡಾಗಿದೆ. ತಕ್ಷಣ ನೌಕಾ ಗಸ್ತು ಕ್ರಾಫ್ಟ್ ಮೂಲಕ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ ಎಂದು ಭಾರತೀಯ ನೌಕಾ ಪಡೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular