alex Certify ಬೆಂಗಳೂರಿಗೆ ಇಂದು ಜೆ.ಪಿ. ನಡ್ದಾ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಇಂದು ಜೆ.ಪಿ. ನಡ್ದಾ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿನ ಕೆಆರ್ ಪುರಂನಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5 ಗಂಟೆಗೆ ಕೆಆರ್ ಪುರಂನ ಬಿಬಿಎಂಪಿ ಕಚೇರಿಯಿಂದ ರೋಡ್ ಶೋ ನಡೆಯಲಿದ್ದು, ನಂತರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು. ವಿಜಯ ಸಂಕಲ್ಪ ಯಾತ್ರೆಯಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಬೈರತಿ ಬಸವರಾಜ್, ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಡಾ.ಕೆ. ಸುಧಾಕರ್, ಮುನಿರತ್ನ, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...