
ಕೋಲಾರ: ಸಂಸದ ಎಸ್. ಮುನಿಸ್ವಾಮಿ ಅವರು ಮಹಿಳೆ ಅವಾಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ಮುನಿಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದ್ದು, ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಕಾರಣ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರದ ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇಳೆ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಏಕೆ ಬೊಟ್ಟು ಇಟ್ಟುಕೊಂಡಿಲ್ಲ. ನಿನ್ನ ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ವಾ? ಯಾರೋ ಕಾಸು ಕೊಡುತ್ತಾರೆಂದು ಮತಾಂತರ ಆಗಿಬಿಡುತ್ತೀರಾ ಎಂದೆಲ್ಲ ರೇಗಾಡಿದ್ದರು. ಇದನ್ನು ವಿರೋಧಿಸಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.