HomeIndiaಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈ: ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಸಂಜೆ ಟಿವಿ ಧಾರಾವಾಹಿ ‘ಗಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಸೆಟ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೊದ 2,000 ಚದರ ಅಡಿ ವಿಸ್ತೀರ್ಣದ ನೆಲ ಮಹಡಿಯಲ್ಲಿ ಸಂಜೆ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸದ್ಯಕ್ಕೆ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಟುಡಿಯೊದಿಂದ ದಟ್ಟವಾದ ಕಪ್ಪು ಹೊಗೆ ಹೊರಸೂಸುತ್ತಿದ್ದು, ಕನಿಷ್ಠ 12 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular