HomeCrimeಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು ಹೋದ ಭೂಪ...!

ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು ಹೋದ ಭೂಪ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶುಕ್ರವಾರದಂದು ಆಘಾತಕಾರಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾರಿನ ಮ್ಯೂಸಿಕ್ ಕಮ್ಮಿ ಮಾಡಲು ಹೇಳಿದರೆಂಬ ಕಾರಣಕ್ಕೆ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು ಹೋಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಶುಕ್ರವಾರ ರಾತ್ರಿ ಎಂಟು ಮೂವತ್ತರ ಸುಮಾರಿಗೆ ದ್ವಾರಕಾ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ದಕ್ಷಿಣ ದ್ವಾರಕಾ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ಸೆಕ್ಟರ್ ಹತ್ತರ ಬಳಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಜೋರಾಗಿ ಮ್ಯೂಸಿಕ್ ಹಾಕಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಕಾರಿನ ಬಳಿ ತೆರಳಿದ ಮುಖ್ಯ ಪೇದೆ ಜಗದೀಶ್, ಸೌಂಡ್ ಕಮ್ಮಿ ಮಾಡುವಂತೆ ಸೂಚಿಸಿದ್ದಾರೆ. ಇದರಿಂದ ಕೆರಳಿದ ಆರೋಪಿ ನಿತಿನ್ ಎಂಬಾತ ಅವರ ಮೇಲೆಯೇ ಕಾರು ಹರಿಸಲು ಮುಂದಾಗಿದ್ದಾನೆ. ಅದೃಷ್ಟವಶಾತ್ ಸ್ವಲ್ಪದರಲ್ಲಿ ಅವರು ಪಾರಾಗಿದ್ದು ಬಳಿಕ ಚಾಲಕನನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular