
ಮಂಗಳೂರು: ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ.
ಮಂಗಳೂರಿನ ಕೂಳೂರಿನಲ್ಲಿರುವ ಸೇನಾ ನೇಮಕಾತಿ ಕಚೇರಿಯಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತಾಗಿ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಬೆಳಗ್ಗೆ 9 ಗಂಟೆಯಿಂದ 11.40ರ ವರೆಗೆ ಸಹಾಯ ಕೇಂದ್ರ ಕಾರ್ಯನಿರ್ವಹಿಸಲಿದೆ.
ಮಂಗಳೂರು ಸೇನಾ ನೇಮಕಾತಿ ಕಚೇರಿ ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ವಿಜಯಪುರ ಸೇರಿ 11 ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಅಭ್ಯರ್ಥಿಗಳು ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಲು joinindianarmy.nic.in ವೆಬ್ ಸೈಟ್ ಗಮನಿಸಬಹುದಾಗಿದೆ.