ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು. ಅವರ ಹಠಾತ್ ನಿಧನ ಆಘಾತ ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧ್ರುವನಾರಾಯಣ ವಿಪಕ್ಷದಲ್ಲಿದ್ದರೂ ಕೂಡ ನನ್ನ ಆತ್ಮೀಯರಾಗಿದ್ದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದು. ಸಂಸತ್ತಿನಲ್ಲಿ ಅವರು ಮಾಡಿದ ಭಾಷಣ ಸ್ಪೂರ್ತಿದಾಯಕವಾಗಿತ್ತು. ದ್ರುವನಾರಾಯಣ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.