ಬೆಂಗಳೂರು: 5 ಹಾಗೂ 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಹೈಕೋರ್ಟ್ ಏಕಸದಸ್ಯಪೀಠದ ಆದೇಶಕ್ಕೆ ತಡೆ ನಿಡಲು ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ.
ಈ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಇಲಾಖೆ 5 ಹಾಗೂ 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಮಾರ್ಚ್ 13ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ ಪೋಷಕರು ವಿರೋಧ ವ್ಯಕ್ತಪಡಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯಪೀಠ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿ ವಿಚರಣೆ ನಡೆಸಿದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದು, ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ.
ಇದೇ ವೇಳೆ ಮಾರ್ಚ್ 13ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ.