alex Certify BIG NEWS: ಪ್ರಧಾನಿ ಮೋದಿ ಆಗಮನ; ಬೆಂಗಳೂರು-ಮೈಸೂರು ಸಂಚಾರ ಮಾರ್ಗ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಆಗಮನ; ಬೆಂಗಳೂರು-ಮೈಸೂರು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಮೈಸೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ ಬಳಿಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ದಶಪಥ ರಸ್ತೆಗೆ ಚಾಲನೆ ನೀಡಲಿದ್ದಾರೆ. ಅಲ್ಲಿಯೇ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಮಾರ್ಗದಲ್ಲಿ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಸಂಚರಿಸುವ ವಾಹನಗಳು ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಈ ಕೆಳಗಿನ ಮಾರ್ಗದಲ್ಲಿ ಸಂಚರಿಸಬಹುದಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕನಕಪುರದಿಂದಸಾಗಿ ಬೆಂಗಳೂರು ತಲುಪಬಹುದಾಗಿದೆ. ಮೈಸೂರಿನಿಂದ ಮಂಡ್ಯ ಮೂಲಕ ತುಮಕೂರು ಕಡೆ ಹೋಗುವವರು ಮೈಸೂರಿನಿಂದ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಸಾಗಬಹುದಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೋಗುವ ವಾಹನಗಳು ಚೆನ್ನಪಟ್ಟಣ, ಹಲಗೂರು, ಮಳವಳ್ಳಿ, ಕಿರುಗಾವಲು, ಬನ್ನೂರು ಮೂಲಕ ಮೈಸೂರಿಗೆ ತೆರಳಬಹುದು. ಬೆಂಗಳೂರಿನಿಂದ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಚೆನ್ನಪಟ್ಟಣ, ಹಲಗೂರು, ಮಳವಳ್ಳಿ ಮೂಲಕ ತೆರಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...