
ದಶಪಥ ರಸ್ತೆ ಲೋಕಾರ್ಪಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದ್ದು ಈ ನಿಟ್ಟಿನಲ್ಲಿ ಮಂಡ್ಯ ನಗರ, ಮದ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಐವರು ಎಸ್ ಪಿ, 24 ಡಿವೈ ಎಸ್ ಪಿ ನೇತೃತ್ವದಲ್ಲಿ 2300 ಪೊಲೀಸ್ ಸಿಬ್ಬಂದಿ, 14 ಡಿಎ ಆರ್ ತುಕಡಿ ನಿಯೋಜನೆ ಮಾಡಲಾಗಿದೆ.

