HomeIndiaಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಬಾತ್ರೂಮ್‌ನಲ್ಲಿ ಧೂಮಪಾನ ಮಾಡಿದ್ದಲ್ಲದೇ ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು 37 ವರ್ಷದ ರಮಾಕಾಂತ್ ಎಂದು ಗುರುತಿಸಲಾಗಿದೆ. ಈತನನ್ನು ಯುಎಸ್ ಪ್ರಜೆ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಕ್ತಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದರು ಎಂದು ವಿಮಾನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ನಂತರ ಪ್ರಯಾಣಿಕನು ತಾನು ಕೆಲವು ಔಷಧಿಯನ್ನು ಹೊತ್ತೊಯ್ಯುತ್ತಿದ್ದೇನೆ ಎಂದು ಹೇಳಿದ್ದ. ಆದರೆ ಅವನ ಲಗೇಜ್ ಪರಿಶೀಲಿಸಿದಾಗ ಅಂತಹ ಯಾವುದೇ ವಸ್ತು ಪತ್ತೆಯಾಗಲಿಲ್ಲ.

ವಿಮಾನದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ ರಮಾಕಾಂತ್ ವಿರುದ್ಧ ಸಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಮದ್ಯಪಾನದ ಸ್ಥಿತಿಯಲ್ಲಿದ್ದರೇ ಅಥವಾ ಮಾನಸಿಕವಾಗಿ ತೊಂದರೆಗೀಡಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular