ಮಂಡ್ಯ: ಬೆಂಗಳೂರು- ಮೈಸೂರು ದಶಪಥ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ 2 ರಾಷ್ಟ್ರೀಯ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದರು. 12,000 ಕೋಟಿ ಮೌಲ್ಯದ 210 ಕೀಮೀ ಉದ್ದದ ಬೆಂಗಳೂರು-ಮೈಸೂರು ದಶಪಥ ಎಕ್ಸ್ ಪ್ರೆಸ್ ವೇ ಗೆ ಹಸಿರು ನಿಶಾನೆ ತೋರಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿಯವರಿಗೆ ರೈತರ ಸಂಕೇತವಾಗಿ ಹಸಿರು ಶಾಲು ಹೊದಿಸಿ ಸನ್ಮಾನ ಮಾಡಿದ್ದು ವಿಶೇಷವಾಗಿತ್ತು.