BREAKING: ಸಕ್ಕರೆ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಆರಂಭ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಪ್ರವಾಸಿ ಮಂದಿರದಿಂದ ರೋಡ್ ಶೋ ಆರಂಭಿಸಿದ್ದಾರೆ. ಸಕ್ಕರೆ ನಾಡಿಗೆ ಬಂದ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ.

ಮೈಸೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಮಂಡ್ಯದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಟಿಗರೆದು ಸ್ವಾಗತಿಸಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಕೇಸರಿ ಕಲರವ ಮೊಳಗಿದ್ದು, ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ಪ್ರವಾಸಿ ಮಂದಿರದಿಂದ ನಂದಾ ಸರ್ಕಲ್ ವರೆಗೆ ಸುಮಾರು 1.8 ಕೀ.ಮೀ ವರೆಗೆ ರೋಡ್ ಶೋ ಸಾಗಲಿದೆ. ಈ ಮೂಲಕ ಮಂಡ್ಯ, ಹಳೆ ಮೈಸೂರು ಭಾಗದಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಯತ್ನಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read