HomeEntertainmentBIG BREAKING: ಸಿನಿ ಮಾಂತ್ರಿಕ ರಾಜಮೌಳಿ ‘RRR’ ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ

BIG BREAKING: ಸಿನಿ ಮಾಂತ್ರಿಕ ರಾಜಮೌಳಿ ‘RRR’ ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ

ಲಾಸ್ ಏಂಜಲೀಸ್: 2023 ಸಾಲಿನ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್ ನಲ್ಲಿರುವ ಡಾಲ್ಬಿ ಥಿಯೇಟರ್ ನಲ್ಲಿ ನಡೆದಿದ್ದು, ‘ಆರ್.ಆರ್.ಆರ್.’ ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದು ಬಂದಿದೆ.

‘ಆರ್.ಆರ್.ಆರ್.’ ಈಗಾಗಲೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಗಳಿಸಿದೆ. 95ನೇ ವರ್ಷದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಆರ್.ಆರ್.ಆರ್.’ ಚಿತ್ರ ತಂಡ ಭಾಗಿಯಾಗಿತ್ತು. ಚಿತ್ರದ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜೂನಿಯರ್ ಎನ್ಟಿಆರ್, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ, ಗಾಯಕರಾದ ರಾಹುಲ್ ಸಿಂಪ್ಲಿಗಂಜ್, ಕಾಲಭೈರವ ಭಾಗಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿನಿ ಮಾಂತ್ರಿಕ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್.’ ಚಿತ್ರದ ‘ನಾಟು ನಾಟು’ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದು, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಅವರು ಆಸ್ಕರ್ ಅವಾರ್ಡ್ ಸ್ವೀಕರಿಸಿದ್ದಾರೆ. ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ‘ನಾಟು ನಾಟು’ ಹಾಡಿಗೆ ಪ್ರಶಸ್ತಿ ಬಂದಿದೆ.

ಪ್ರಶಸ್ತಿ ಪಡೆದ ನಂತರ ಮಾತನಾಡಿದ ಕೀರವಾಣಿ, ನನ್ನ ಮನಸ್ಸಿನಲ್ಲಿ ಒಂದೇ ಒಂದು ಆಸೆ ಇತ್ತು. ಅದು RRR ಗೆಲ್ಲಬೇಕು ಎಂಬುದಾಗಿತ್ತು. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ಕ್ಷಣ. ವಿಶ್ವದ ಅಗ್ರಸ್ಥಾನಕ್ಕೆ ಏರಿದ್ದೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular