
ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ ಎಂದು ಈ ಹಿಂದೆ ಹೇಳಿದ್ದೆ. ಅದೇ ಮಾತು ಈಗಲೂ ಹೇಳುತ್ತೇನೆ ಎಂದು ಹೇಳಿದರು.

