ಸೀರಿಯಲ್ ಕಿಲ್ಲರ್ ನಂತೆ ಅಲ್ಲೊಬ್ಬ ಸೀರಿಯಲ್ ಕಿಸ್ಸರ್ ಇದ್ದಾರೆ. ಅವನು ಕಂಡಕಂಡ ಮಹಿಳೆಯರಿಗೆಲ್ಲಾ ಕಿಸ್ ಕೊಡ್ತಿರ್ತಾನೆ.
ಬಿಹಾರದ ಜಮುಯಿ ಜಿಲ್ಲೆಯಲ್ಲಿ ದುಷ್ಕರ್ಮಿಯೊಬ್ಬ ಮಹಿಳೆಗೆ ಬಲವಂತವಾಗಿ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಲೈಂಗಿಕ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಸಂತ್ರಸ್ತೆ ಜಮುಯಿಯಲ್ಲಿರುವ ಸದರ್ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಮಾರ್ಚ್ 10 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಯು ಆಸ್ಪತ್ರೆಯ ಗೋಡೆ ಹಾರಿ ಸಂತ್ರಸ್ತೆ ಫೋನ್‌ನಲ್ಲಿ ಮಾತನಾಡುವುದನ್ನು ಕಂಡು ನಂತರ ಅವಳನ್ನು ಹಿಡಿದು ಮುತ್ತಿಟ್ಟಿದ್ದಾನೆ.
ಸಂತ್ರಸ್ತೆ, ಜಮುಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವರದಿಗಳ ಪ್ರಕಾರ ಘಟನೆ ನಂತರ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೋರಿದ್ದಾರೆ ಮತ್ತು ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುವ ಮಹಿಳೆಯರನ್ನು ರಕ್ಷಿಸಲು ಮುಳ್ಳು ಬೇಲಿಯನ್ನು ಅಳವಡಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಅನೇಕರು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನುಗಳಿಗೆ ಕರೆ ನೀಡಿದ್ದಾರೆ. ಎಸ್‌ಡಿಪಿಒ ಡಾ ರಾಕೇಶ್ ಕುಮಾರ್ ಅವರ ಪ್ರಕಾರ ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಆರೋಪಿಯನ್ನು ಶೀಘ್ರದಲ್ಲೇ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಈ ಪ್ರದೇಶದಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿರುವುದು ಇದೇ ಮೊದಲು ಎಂದು ಪೊಲೀಸರು ತಿಳಿಸಿದ್ದಾರೆ.
आपके शहर में घूम रहा है सीरियल किसर, वो पीछे से आता है और किस कर के भाग जाता है।
जमुई के सदर अस्पताल में अगर इलाज कराने जा रहे हैं तो पहले इस वीडियो पर डाल लें नज़र।#Jamui #Hospital #ViralVideo #SerialKisser pic.twitter.com/F60AX6hjiy
— Bihar Tak (@BiharTakChannel) March 13, 2023

