HomeIndiaಐಪಿಎಸ್ ಅಧಿಕಾರಿ ಜೊತೆ ಪಂಜಾಬ್‌ ಸಚಿವನ ನಿಶ್ಚಿತಾರ್ಥ

ಐಪಿಎಸ್ ಅಧಿಕಾರಿ ಜೊತೆ ಪಂಜಾಬ್‌ ಸಚಿವನ ನಿಶ್ಚಿತಾರ್ಥ

ಪಂಜಾಬ್ ಸರ್ಕಾರದ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಅವರು ಐಪಿಎಸ್ ಅಧಿಕಾರಿ ಜ್ಯೋತಿ ಯಾದವ್ ಅವರೊಂದಿಗೆ ಈ ತಿಂಗಳ ಕೊನೆಯಲ್ಲಿ ವಿವಾಹವಾಗಲಿದ್ದಾರೆ ಎಂದು ಎಎಪಿ ಪಕ್ಷದ ಮೂಲಗಳು ತಿಳಿಸಿವೆ.

ಈ ಜೋಡಿಯು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಬೈನ್ಸ್ ಅವರು ಪ್ರಸ್ತುತ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಂಜಾಬ್ ಅಸೆಂಬ್ಲಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಅವರು ಮುಂಬರುವ ದಿನಗಳಲ್ಲಿ ತಮ್ಮ ಜೀವನದ ಹೊಸ ಪ್ರಯಾಣವನ್ನು ಪ್ರಾರಂಭಿಸಲಿರುವ ಬೈನ್ಸ್ ಮತ್ತು ಯಾದವ್ ಅವರನ್ನು ಅಭಿನಂದಿಸಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ 32 ವರ್ಷದ ಬೈನ್ಸ್ ಆನಂದಪುರ ಸಾಹಿಬ್‌ನ ಗಂಭೀರ್‌ಪುರ ಗ್ರಾಮದವರು. 2017ರ ಚುನಾವಣೆಯಲ್ಲಿ ಸಾಹ್ನೇವಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಬೇನ್ಸ್ ಈ ಹಿಂದೆ ರಾಜ್ಯದಲ್ಲಿ ಎಎಪಿಯ ಯುವ ಘಟಕವನ್ನು ಮುನ್ನಡೆಸಿದ್ದರು. ಅವರು 2014 ರಲ್ಲಿ ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದಿಂದ ತಮ್ಮ ಬಿಎ, ಎಲ್ಎಲ್ ಬಿ ಪೂರ್ಣಗೊಳಿಸಿದರು. ಅವರು 2018 ರಲ್ಲಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನಲ್ಲಿ ಪ್ರಮಾಣಪತ್ರವನ್ನು ಪಡೆದಿದ್ದಾರೆ.

ಜ್ಯೋತಿ ಯಾದವ್, ಪಂಜಾಬ್-ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು ಪ್ರಸ್ತುತ ಮಾನ್ಸಾ ಜಿಲ್ಲೆಯಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular