ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕುರಿತ ಅಂತಿಮ ವಾದವನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಏಪ್ರಿಲ್ 18 ರಂದು ಆಲಿಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಈ ವಿಷಯದ ಕುರಿತು ಯಾವುದೇ ನಿರ್ಧಾರವು ಸಮಾಜದ ಮೇಲೆ ಭಾರೀ ಪ್ರಭಾವ ಬೀರುತ್ತದೆ. ಹೀಗಾಗಿ ಇದನ್ನು ಮೂಲಭೂತ ಪ್ರಾಮುಖ್ಯತೆಯ ವಿಷಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಂದು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್ ಮತ್ತು ಯೂಟ್ಯೂಬ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.
ಈ ತೀರ್ಪು ಸಮಾಜದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಯಾರ ಸಮಯವನ್ನು ಕಡಿತಗೊಳಿಸಬೇಡಿ ಮತ್ತು ಇದನ್ನು ಪರಿಗಣಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.
ಸಂವಿಧಾನದ 145 (3) ನೇ ವಿಧಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಐವರು ನ್ಯಾಯಾಧೀಶರ ಪೀಠವು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಹರಿಸಿದರೆ ಅದು ಸೂಕ್ತವೆಂದು ನಾವು ಭಾವಿಸುತ್ತೇವೆ. ಹೀಗಾಗಿ, ನಾವು ಅದನ್ನು ಸಂವಿಧಾನಿಕ ಪೀಠದ ಮುಂದೆ ಇಡಲು ನಿರ್ದೇಶಿಸುತ್ತೇವೆ ಎಂದು ನ್ಯಾಯಮೂರ್ತಿಗಳು ಹೇಳಿದರು.
ಸಂವಿಧಾನದ ವ್ಯಾಖ್ಯಾನಕ್ಕೆ ಸಂಬಂಧಿಸಿದ ಕಾನೂನಿನ ಗಣನೀಯ ಪ್ರಶ್ನೆಯನ್ನು ಒಳಗೊಂಡಿರುವ ಯಾವುದೇ ಪ್ರಕರಣವನ್ನು ಕನಿಷ್ಠ ಐದು ನ್ಯಾಯಾಧೀಶರು ನಿರ್ಧರಿಸಬೇಕು ಎಂದು ಆರ್ಟಿಕಲ್ 145 (3) ಹೇಳುತ್ತದೆ.