ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಮಧ್ಯೆ ರಾಜಕೀಯ ಪಕ್ಷಗಳ ನಾಯಕರುಗಳು ಈಗಾಗಲೇ ಅಬ್ಬರದ ಪ್ರಚಾರ ಕಾರ್ಯ ಆರಂಭಿಸಿದ್ದು, ಹಲವು ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ ರೀತಿಯ ಹಾರಗಳನ್ನು ಹಾಕಿ ಸಂಭ್ರಮಿಸಿದ್ದಾರೆ.
ಹೀಗೆ ವಿವಿಧ ರೀತಿಯ ಬೃಹತ್ ಹಾರಗಳನ್ನು ಹಾಕಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಧ್ಯೆ, ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಹಾರ ಹಾಕಿಸಿಕೊಂಡ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೌದು, ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸುತ್ತಿರುವ ದರ್ಶನ್ ಪುಟ್ಟಣ್ಣಯ್ಯ ವಿಶ್ವೇಶ್ವರಯ್ಯ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ನವಿಲುಗರಿ ಹಾರ ಹಾಕಿ ಸ್ವಾಗತಿಸಿದ್ದರು. ಇದರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಬಳಿಕ ಇದು ಅರಣ್ಯ ಇಲಾಖೆ ಗಮನಕ್ಕೆ ಬಂದಿದೆ.
ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದ ಮೂಲಕ ತಮಗೆ ದೊರೆತ ಮಾಹಿತಿಯನ್ನು ಆಧರಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದ್ದಾರೆ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದ ಮೂಲಕ ತಮಗೆ ದೊರೆತ ಮಾಹಿತಿಯನ್ನು ಆಧರಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದ್ದಾರೆ.