ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಗಿದೆ.
ಧ್ರುವನಾರಾಯಣ ಅವರು ಈ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದು, ಪೂರ್ವ ತಯಾರಿ ಮಾಡಿಕೊಂಡಿದ್ದರು. ಈಗ ಧ್ರುವನಾರಾಯಣ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಬೇಕೆಂದು ಬೆಂಬಲಿಗರಿಂದ ಭಾರಿ ಒತ್ತಾಯ ಕೇಳಿಬಂದಿದೆ. ಅಂತ್ಯಕ್ರಿಯೆಗೆ ಮೊದಲೇ ಟಿಕೆಟ್ ಘೋಷಣೆ ಮಾಡಬೇಕೆಂದು ಬೆಂಬಲಿಗರು ಪಟ್ಟು ಹಿಡಿದಿದ್ದರು. ನಾಯಕರಿಗೆ ಮನವಿ ಕೂಡ ಮಾಡಿದ್ದರು.
ಧ್ರುವನಾರಾಯಣ ಕುಟುಂಬಕ್ಕೆ ಅನ್ಯಾಯ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ದರ್ಶನ್ ಗೆ ಕರೆ ಮಾಡಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಬೆಂಬಲಿಗರು ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ಧ್ರುವನಾರಾಯಣ ಪುತ್ರ ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ನೀಡುವಂತೆ ಮೂಲ ಕಾಂಗ್ರೆಸ್ಸಿಗರು ಒತ್ತಾಯಿಸಿ ದರ್ಶನ್ ಬೆಂಬಲಕ್ಕೆ ನಿಂತಿದ್ದಾರೆ. ಡಿ.ಕೆ. ಶಿವಕುಮಾರ್ ಧ್ರುವನಾರಾಯಣ ಕುಟುಂಬಕ್ಕೆ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದ್ದು, ಮಲ್ಲಿಕಾರ್ಜುನ ಖರ್ಗೆ ಕರೆ ಮಾಡಿ ಬಯೋಡೇಟಾ ಪಡೆದುಕೊಂಡಿದ್ದಾರೆ. ಖರ್ಗೆ ಕರೆ ಬೆನ್ನಲ್ಲೇ ಬೆಂಬಲಿಗರು ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಮಹಾದೇವಪ್ಪ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.