
ಬೆಂಗಳೂರಿನಿಂದ ಮೈಸೂರಿನತ್ತ ಸಾಗುವ ವಾಹನಗಳಿಗೆ ಬೆಂಗಳೂರಿನ ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರದ ಶೇಷಗಿರಿ ಫ್ಲಾಜಾದಲ್ಲಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಿದೆ.
ಶೇಷಗಿರಿ ಟೋಲ್ ಬಳಿ ಜಮಾವಣೆಗೊಂಡಿರುವ ಕಾಂಗ್ರೆಸ್ ಹಾಗೂ ಕನ್ನಡ ಪರ ಸಂಘಟನೆ ಕಾರ್ಯಕರ್ತರು ರಸ್ತೆಯಲ್ಲಿ ಹಾಲಿನ ಕ್ಯಾನ್ ಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ಸಂಗ್ರಹದಿಂದಾಗಿ ರೈತರು, ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ತಕ್ಷಣ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

