HomeKarnatakaBIG NEWS: ಕುತೂಹಲ ಮೂಡಿಸಿದ ವಸತಿ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ

BIG NEWS: ಕುತೂಹಲ ಮೂಡಿಸಿದ ವಸತಿ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ

ವಸತಿ ಸಚಿವ ವಿ. ಸೋಮಣ್ಣ ಇಂದು ಪತ್ರಿಕಾಗೋಷ್ಠಿ ಕರೆದಿದ್ದು, ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ವಿ. ಸೋಮಣ್ಣ, ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರದಲ್ಲಿ ನಡೆದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಕಾರ್ಯಕ್ರಮದಿಂದಲೂ ವಿ. ಸೋಮಣ್ಣ ದೂರ ಉಳಿದಿದ್ದರು. ಹೀಗಾಗಿ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಹರಡಿತ್ತು.

ಇದೀಗ ಇಂದು ಮಧ್ಯಾಹ್ನ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ವಿ. ಸೋಮಣ್ಣ, ಈ ಎಲ್ಲ ವಿಚಾರಗಳ ಕುರಿತಂತೆ ಸ್ಪಷ್ಟನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular