HomeKarnatakaBIG NEWS: ಕೃಷ್ಣನ ಶಾಪದಿಂದ ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಂಡಿದ್ದಾರೆ; ಕೃಷ್ಣ ಮಠಕ್ಕೆ ಭೇಟಿ ನೀಡಿ...

BIG NEWS: ಕೃಷ್ಣನ ಶಾಪದಿಂದ ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಂಡಿದ್ದಾರೆ; ಕೃಷ್ಣ ಮಠಕ್ಕೆ ಭೇಟಿ ನೀಡಿ ಪಾಪ ಕಳೆದುಕೊಳ್ಳಲಿ; K.S. ಈಶ್ವರಪ್ಪ ಹೇಳಿಕೆ

ಉಡುಪಿ: ಕೃಷ್ಣನ ಶಾಪದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಲವು ಬಾರಿ ಉಡುಪಿಗೆ ಬಂದಿದ್ದರು. ಆದರೆ ಒಮ್ಮೆಯೂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ. ಭಕ್ತ ಕನಕದಾಸರ ಪುತ್ಥಳಿ ಕೃಷ್ಣ ಮಠದಲ್ಲಿದೆ. ಇಂತಹ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಯಾಕೆ ಭೇಟಿ ಕೊಡಲಿಲ್ಲ ? ಎಂದು ಪ್ರಶ್ನಿಸಿದ್ದಾರೆ.

ಕೃಷ್ಣ ಮಠಕ್ಕೆ ಸಿದ್ದರಾಮಯ್ಯ ಬಂದರೆ ಒಳ್ಳೆಯದಾಗುತ್ತದೆ. ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಹೇಳುತ್ತಿದ್ದೇನೆ. ಕೃಷ್ಣ ಮಠಕ್ಕೆ ಬಂದು ಸಿದ್ದರಾಮಯ್ಯ ತಮ್ಮ ಪಾಪ ಕಳೆದುಕೊಳ್ಳಲಿ. ಸಿದ್ದರಾಮಯ್ಯ ಮೇಲಿನ ಪ್ರೀತಿಯಿಂದ ಈ ಮಾತು ಹೇಳುತ್ತಿದ್ದೆನೆ. ಸಿದ್ದರಾಮಯ್ಯ ಎಲ್ಲಾ ದೇವಾಲಯಗಳಿಗೆ ಹೋಗುತ್ತಾರೆ. ಆದರೆ ಕೃಷ್ಣಮಠಕ್ಕೆ ಬರುವುದಿಲ್ಲ. ಮಠಗಳಿಗೂ ಸಿದ್ದರಾಮಯ್ಯ ಹಣ ಕೊಡುತ್ತಾರೆ. ನಮ್ಮಿಬ್ಬರ ನಡುವಿನ ಸ್ನೇಹ ಚೆನ್ನಾಗಿದೆ. ಅವರಿಗೆ ಒಳ್ಳೆಯದಾಗಲೆಂದು ಹೇಳುತ್ತಿದ್ದೇನೆ ಕೃಷ್ಣ ಮಠಕ್ಕೆ ಭೇಟಿ ನೀಡಲಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular