HomeKarnatakaBIG NEWS: ಮಾ. 20 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ; ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭ

BIG NEWS: ಮಾ. 20 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ; ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅವರು ಯುವ ಕಾಂಗ್ರೆಸ್ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ,

ಭಾರತ ಜೋಡೋ ಯಾತ್ರೆಯ ನಂತರ ರಾಹುಲ್ ಗಾಂಧಿ ಇದೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಯುವಕರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಕಾಂಗ್ರೆಸ್ ನಿಂದ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ 2000 ರೂ., ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರು ಯುವಕರಿಗೆ ಜಾರಿಗೊಳಿಸುವ ಯೋಜನೆ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular