HomeKarnatakaದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ

ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ

ರಾಮನಗರ: ಆರ್. ಧ್ರುವನಾರಾಯಣ ಪುತ್ರ ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಡ್ಜ್ ಆಗಿದ್ದಾರೆ. ನಾನು ದರ್ಶನ್ ಪರ ವಕೀಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಧ್ರುವನಾರಾಯಣ ಅವರ ಅಂತಿಮ ದರ್ಶನ ಪಡೆಯಲು ಸ್ವತಃ ಮಲ್ಲಿಕಾರ್ಜುನ ಖರ್ಗೆ ಬಂದಿದ್ದರು. ಆರ್. ಧ್ರುವನಾರಾಯಣ ಅಭಿಮಾನಿಗಳ ಆಕ್ರಂದನವನ್ನು ಅವರು ಕಣ್ಣಾರೆ ಕಂಡಿದ್ದಾರೆ. ದರ್ಶನ್ ಟಿಕೆಟ್ ವಿಚಾರದಲ್ಲಿ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧ್ರುವನಾರಾಯಣ ಅವರಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ. ಹಳೆ ಮೈಸೂರು ಭಾಗದಲ್ಲಿ ಅವರು ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು. ನನ್ನ ತಮ್ಮನಂತೆ ಇದ್ದರು ಎಂದು ಡಿಕೆಶಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular