HomeKarnatakaಬ್ಯಾಕ್ಲಾಗ್ ಹುದ್ದೆ ಸೇರಿ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಕ್ಲಾಗ್ ಹುದ್ದೆ ಸೇರಿ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬ್ಯಾಕ್ ಲಾಗ್ ಹುದ್ದೆ ಸೇರಿ ಖಾಲಿ ಇರುವ 57 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.

ಏಪ್ರಿಲ್ 10 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ನ್ಯಾಯಿಕ ಸೇವಾ ನೇಮಕಾತಿ ನಿಯಮ 2004, 2011, 2015, 2016ರ ತಿದ್ದುಪಡಿ ನಿಯಮಗಳ ಅಡಿ ನೇಮಕಾತಿ ಮಾಡಿಕೊಳ್ಳಲಾಗುವುದು. ನೋಂದಾಯಿತ  ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿ ಪಡೆದು ವಕೀಲರಾಗಿ ನೋಂದಣಿ ಮಾಡಿಸಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ 38 ವರ್ಷ, ಇತರೆಯವರಿಗೆ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಹೈಕೋರ್ಟ್ ನಡೆಸುವ ಲಿಖಿತ ಮತ್ತು ಮೌಖಿಕ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದು ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 27,700 ರೂ.ನಿಂದ 44,770 ರೂ. ವರೆಗೆ ವೇತನ ಶ್ರೇಣಿ ಇರಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular