ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ವರದಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕೈ ಸೇರಿದ್ದು, ವಿವಿಧ ಜಾತಿಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ ಇದರಲ್ಲಿ ವಿಸ್ತೃತ ಅಂಶಗಳು ಒಳಗೊಂಡಿವೆ.
ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸಲಾಗಿತ್ತು. ಇದೀಗ ಆಯೋಗ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 32 ವರದಿಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದೆ.
ಸಣ್ಣಪುಟ್ಟ ಜಾತಿಗಳು ಮೀಸಲಾತಿ ವಂಚಿತವಾಗಿರುವ ಮತ್ತು ಲಿಂಗಾಯಿತ ಸಮುದಾಯಕ್ಕೆ ಸೇರಿದ ವಿವಿಧ ಸಣ್ಣಪುಟ್ಟ ಪಂಗಡಗಳ ಬಗ್ಗೆ ವರದಿ ವಿವರಣೆ ನೀಡಲಾಗಿದೆ. ಮೀಸಲಾತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ.
ಇನ್ನು ಕೋವಿಡ್ ಕಾರಣದಿಂದ ಅನಾಥವಾದ ಮಕ್ಕಳಿಗೆ ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಮಾದರಿ ವಿಶೇಷ ಮೀಸಲಾತಿ ನೀಡಬೇಕು ಎಂದು ಆಯೋಗ ಹೇಳಿದೆ. ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.