ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಯಾದ ಎರಡೇ ದಿನಕ್ಕೆ ಕಿತ್ತು ಬಂದಿದ್ದು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಒಂದು ವರ್ಷವಾದರೂ ಬಾಳಿಕೆ ಬರಬೇಕಿತ್ತು, ಒಂದು ತಿಂಗಳು, ಕೊನೆ ಪಕ್ಷ ಒಂದು ವಾರವಾದರೂ ಬಾಳಿಕೆ ಬರಬೇಕಿತ್ತು. ಆದರೆ ಉದ್ಘಾಟನೆಯಾದ ಒಂದೇ ದಿನಕ್ಕೆ ಕಿತ್ತು ಹೋಗಿದೆ, ರಾಜ್ಯದ 40% ಕೇಂದ್ರದ 40%, ಒಟ್ಟು 80% ಕಮಿಷನ್ ಕಾಮಗಾರಿಯ ಬಂಡವಾಳ ಹೊರಬಂದಿದೆ. ದಶಪಥವಲ್ಲ ಇದು ಭ್ರಷ್ಟಪಥ ! ಎಂದು ವಾಗ್ದಾಳಿ ನಡೆಸಿದೆ.
ಕಿತ್ತುಹೋದ ರಸ್ತೆ ದುರಸ್ತಿ ಕಾಮಗಾರಿಯ ಗುದ್ದಲಿ ಪೂಜೆಗೆ ಮತ್ತೊಮ್ಮೆ ಮೋದಿಯನ್ನು ಕರೆಸಿ. ದುರಸ್ತಿಯಾದ ನಂತರ ಉದ್ಘಾಟನೆಗೆ ಇನ್ನೊಮ್ಮೆ ಮೋದಿ ಕರೆಸಿ. ಗುಂಡಿ ಮುಚ್ಚಿದ ಸಂತೋಷಕ್ಕಾಗಿ ಮಗದೊಮ್ಮೆ ಮೋದಿ ಕರೆಸಿ ರೋಡ್ ಶೋ ಮಾಡಿಸಿ. ಆಗಬಹುದೇ ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಅಣಕಿಸಿದೆ.