5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದಲ್ಲಿ ಹಿನ್ನಡೆಯಾಗಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈಗ ಸರ್ಕಾರದ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಹೌದು, ರಾಜ್ಯ ಪಠ್ಯಕ್ರಮ ಹೊಂದಿದ ಐದು ಮತ್ತು ಎಂಟನೇ ತರಗತಿಯ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಹಸಿರು ನಿಶಾನೆ ತೋರಿಸಿದೆ.
ಮಧ್ಯಂತರ ಆದೇಶದಲ್ಲಿ ಈ ಕುರಿತು ಸೂಚನೆ ನೀಡಲಾಗಿದ್ದು, ಮಾರ್ಚ್ 27ರಿಂದ ಪರೀಕ್ಷೆ ನಡೆಸಬೇಕು. ಪಠ್ಯಕ್ರಮಕ್ಕೆ ಹೊರತಾದ ಪ್ರಶ್ನೆಗಳನ್ನು ಕೇಳುವಂತಿಲ್ಲ ಹಾಗೂ ಸರ್ಕಾರ ಇದನ್ನು ಖಾತರಿಪಡಿಸಬೇಕು ಎಂದು ತಿಳಿಸಲಾಗಿದೆ.