HomeKarnatakaBIG NEWS: ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಹಾದೇವಪ್ಪ ಅವರಿಂದಲೂ ಧ್ರುವನಾರಾಯಣ ಪುತ್ರನಿಗೆ ಬೆಂಬಲ

BIG NEWS: ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಹಾದೇವಪ್ಪ ಅವರಿಂದಲೂ ಧ್ರುವನಾರಾಯಣ ಪುತ್ರನಿಗೆ ಬೆಂಬಲ

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ. ಎಚ್.ಸಿ. ಮಹಾದೇವಪ್ಪ, ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕ ಧ್ರುವನಾರಾಯಣ ಅವರ ಪುತ್ರ ದರ್ಶನ್ ಅವರಿಗೆ ತಮ್ಮ ಬೆಂಬಲ ಸೂಚಿಸಿದ್ದು, ಇದರಿಂದಾಗಿ ನಂಜನಗೂಡು ಕ್ಷೇತ್ರದ ಟಿಕೆಟ್ ದರ್ಶನ್ ಅವರಿಗೇ ಸಿಗುವುದು ಖಚಿತವಾಗಿದೆ.

ಬುಧವಾರದಂದು ತಮ್ಮ ಪುತ್ರ ಸುನಿಲ್ ಬೋಸ್ ಜೊತೆ ಧ್ರುವನಾರಾಯಣ ಅವರ ಮನೆಗೆ ಭೇಟಿ ನೀಡಿದ್ದ ಹೆಚ್.ಸಿ. ಮಹಾದೇವಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧ್ರುವನಾರಾಯಣ ಅವರ ಪುತ್ರ ದರ್ಶನ್ ಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೋರಿ ನಾನು ಹಾಗೂ ಧ್ರುವನಾರಾಯಣ ಇಬ್ಬರು ಕೂಡ ಅರ್ಜಿ ಸಲ್ಲಿಸಿದ್ದು ನಿಜ. ಆದರೆ ಅವರ ಹಠಾತ್ ನಿಧನದಿಂದ ದಲಿತ ಸಮುದಾಯಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಹೇಳಿದ ಅವರು, ಇಂತಹ ಸಂದರ್ಭದಲ್ಲಿ ದರ್ಶನ್ ಜೊತೆ ನಿಲ್ಲುವುದು ನನ್ನ ಕರ್ತವ್ಯ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular