HomeKarnatakaBIG NEWS: ಎಲ್ಲವೂ ಸುಖಾಂತ್ಯವಾಗಿದೆ ಎಂದ ಸಚಿವ ಸೋಮಣ್ಣ

BIG NEWS: ಎಲ್ಲವೂ ಸುಖಾಂತ್ಯವಾಗಿದೆ ಎಂದ ಸಚಿವ ಸೋಮಣ್ಣ

ಬೆಂಗಳೂರು: ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ವಸತಿ ಸಚಿವ ವಿ.ಸೋಮಣ್ಣ ಹೈಕಮಾಂಡ್ ಮುಂದೆ ತಮ್ಮ ನೋವು ತೋಡಿಕೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಚಿವ ಸೋಮಣ್ಣ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ಯಾವುದೇ ಗೊಂದಲಗಳು ಇಲ್ಲ, ಎಲ್ಲವೂ ಸುಖಾಂತ್ಯವಾಗಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಇರುವ ಕಾರಣ ಗೊಂದಲ ನಿವಾರಣೆ ಮಾಡಿದ್ದಾರೆ. ಯಾವುದೇ ಗೊಂದಲಗಳಿಲ್ಲ, ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಗ್ಗೆಯೂ ಯಾವ ಅಸಮಾಧಾನವಿಲ್ಲ. ಅವರು ಈ ರಾಜ್ಯದ ನಾಯಕರು ನಾಲ್ಕು ಬಾರಿ ಸಿಎಂ ಆಗಿದ್ದವರು. ಅನೇಕ ಗಣ್ಯರ ಸಾಲಿನಲ್ಲಿ ಅವರೂ ಒಬ್ಬರು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular