HomeCrimeಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ನೇಹಿತನಿಂದಲೇ ಹತ್ಯೆಯಾಗಿರುವ ಶಂಕೆ

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ನೇಹಿತನಿಂದಲೇ ಹತ್ಯೆಯಾಗಿರುವ ಶಂಕೆ

ಇತ್ತೀಚೆಗೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿದ್ದ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ಈಗ ಆಕೆಯ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೃತ ಮಹಿಳೆ ಕಲಾಸಿಪಾಳ್ಯದ ನಿವಾಸಿ ಎಂದು ಹೇಳಲಾಗಿದ್ದು, ಪತಿಯನ್ನು ತೊರೆದು ತನ್ನ ಮಕ್ಕಳೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ. ಈಕೆಯನ್ನು ಸ್ನೇಹಿತನೇ ಕೊಲೆ ಮಾಡಿ ರೈಲು ನಿಲ್ದಾಣದಲ್ಲಿದ್ದ ಡ್ರಮ್ ನಲ್ಲಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲು ನಿಲ್ದಾಣದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಯನ್ನು ಆಧರಿಸಿ ಮೃತ ಮಹಿಳೆಯ ಸ್ನೇಹಿತ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular