HomeKarnatakaBIG NEWS: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ವಿರುದ್ಧ ಸಿಡಿದೆದ್ದ ಲಿಂಗಾಯಿತ ಸಮುದಾಯ; ಸಿ.ಟಿ.ರವಿ ಕಂಡಲ್ಲಿ ಘೇರಾವ್...

BIG NEWS: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ವಿರುದ್ಧ ಸಿಡಿದೆದ್ದ ಲಿಂಗಾಯಿತ ಸಮುದಾಯ; ಸಿ.ಟಿ.ರವಿ ಕಂಡಲ್ಲಿ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಲು ಕರೆ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧವೇ ವೀರಶೈವ ಲಿಂಗಾಯಿತ ಸಮುದಾಯ ಸಿಡಿದೆದ್ದಿದ್ದು, ಪ್ರತಿಭಟನೆಗೆ ಮುಂದಾಗಿವೆ.

ಸಿ.ಟಿ.ರವಿ ಪದೇ ಪದೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಡುತ್ತಿದ್ದು, ಇದು ಚಿಕ್ಕಮಗಳೂರು ಭಾಗದಲ್ಲಿ ವೀರಶೈವ ಲಿಂಗಾಯಿತರ ಕೋಪಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ಎಲ್ಲಿಯೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರಿಗೆ ಮುತ್ತಿಗೆ ಹಾಕಿ, ಕಿತ್ತೋದ ಸಿ.ಟಿ.ರವಿ ಎಂದು ಘೋಷಣೆ ಕೂಗಬೇಕು ಎಂದು ವೀರಶೈವ ಲಿಂಗಾಯಿತ ಸಂಘಟನೆ ಪ್ರಕಟಣೆ ಹೊರಡಿಸಿದೆ. ಅಲ್ಲದೇ ತಕ್ಷಣ ಸಿ.ಟಿ.ರವಿ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದೆ.
ಸಿ.ಟಿ.ರವಿ,ವೀರಶೈವ ಲಿಂಗಾಯಿತ

For Latest News Updates, Join Our Whatsapp Community🚩
RELATED ARTICLES

Most Popular