HomeKarnatakaBIG NEWS: ಮಾಜಿ ಸಿಎಂ ಯಡಿಯೂರಪ್ಪ, ಸಿ.ಟಿ.ರವಿ ಕಾರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ; ಮೂಡಿಗೆರೆಯಲ್ಲಿ ಹೈಡ್ರಾಮಾ

BIG NEWS: ಮಾಜಿ ಸಿಎಂ ಯಡಿಯೂರಪ್ಪ, ಸಿ.ಟಿ.ರವಿ ಕಾರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ; ಮೂಡಿಗೆರೆಯಲ್ಲಿ ಹೈಡ್ರಾಮಾ

ಚಿಕ್ಕಮಗಳೂರು: ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.

ಮೂಡಿಗೆರೆಯಲ್ಲಿ ಇಂದು ಬಿಜೆಪಿ ವಿಜಯಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿ.ಟಿ.ರವಿ, ಎಂಎಲ್ ಸಿ ಪ್ರಾಣೇಶ್ ಆಗಮಿಸುತ್ತಿದ್ದ ವೇಳೆ ಮೂಡಿಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದ ಬಿಜೆಪಿ ಕಾರ್ಯಕರ್ತರು, ಯಡಿಯುರಪ್ಪ, ಸಿಟಿ ರವಿ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಕಾರಣಕ್ಕೂ ಎಂ.ಪಿ.ಕುಮಾರಸ್ವಾಮಿಗೆ ಈಬಾರಿ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಮೂಡಿಗೆರೆ ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಮಾಜಿ ಸಿಎಂ ಯಡಿಯೂರಪ್ಪ ವಿಜಯಸಂಕಲ್ಪ ಸಮಾವೇಶವನ್ನೇ ರದ್ದು ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಸಿ.ಟಿ.ರವಿ ಕೂಡ ಸಿಡಿಮಿಡಿಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular