HomeKarnatakaBIG NEWS: ನಗರಸಭಾ ಸದಸ್ಯ ಆತ್ಮಹತ್ಯೆಗೆ ಶರಣು

BIG NEWS: ನಗರಸಭಾ ಸದಸ್ಯ ಆತ್ಮಹತ್ಯೆಗೆ ಶರಣು

ಮಂಗಳೂರು: ನಗರಸಭಾ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉರಮಾಲ್ ನಲ್ಲಿ ನಡೆದಿದೆ.

ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭಾ ಸದಸ್ಯ. ಶಿವರಾಮ್ ಪುತ್ತೂರು ವಾರ್ಡ್ ನಂ.1ರ ಸದಸ್ಯರಾಗಿದ್ದರು. ಉರಮಾಲ್ ನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವರಾಮ್ ಸಫಲ್ಯ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular