HomeKarnatakaBIG NEWS: ಕಚೇರಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯನ ಶವ ಪತ್ತೆ

BIG NEWS: ಕಚೇರಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯನ ಶವ ಪತ್ತೆ

ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೃತದೇಹ ಕಚೇರಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರಿನ ಗಂಜಿಮಠ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

35 ವರ್ಷದ ಸಂದೀಪ್ ಶೆಟ್ಟಿ ಮೃತ ಗ್ರಾಮ ಪಂಚಾಯತ್ ಸದಸ್ಯ, ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ಆಗಿದ್ದ ಸಂದೀಪ್ ಗ್ರಾಮ ಪಂಚಾಯತ್ ಕಚೇರಿಯಲ್ಲಿಯೇ ನೇಣಿಗೆ ಕೊರಳೊಡ್ಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಸಂದೀಪ್ ಶೆಟ್ಟಿ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಆದರೆ ಈಗ ಗಂಜೀಮಠದ ನೀರುಮಾರ್ಗದಲ್ಲಿರುವ ತಮ್ಮ ಕಚೇರಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಬಳಿ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular