HomeKarnatakaವಿಧಾನಸಭೆ ಚುನಾವಣೆ: ಯಾವುದೇ ತಕರಾರು ಇಲ್ಲದ 135 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ...

ವಿಧಾನಸಭೆ ಚುನಾವಣೆ: ಯಾವುದೇ ತಕರಾರು ಇಲ್ಲದ 135 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುವುದು. ದೆಹಲಿ ಎಐಸಿಸಿ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಿಇಸಿ ಸಭೆ ನಡೆಯಲಿದೆ.

224 ಕ್ಷೇತ್ರಗಳ ಪೈಕಿ 135 ಕ್ಷೇತ್ರಗಳಲ್ಲಿ ಯಾವುದೇ ತಕರಾರು ಇಲ್ಲ. 66 ಕ್ಷೇತ್ರಗಳಿಗೆ ತಲಾ ಒಬ್ಬರ ಹೆಸರನ್ನು ಸ್ಕ್ರೀನಿಂಗ್ ಕಮಿಟಿ ಫೈನಲ್ ಮಾಡಿದೆ. ಹಾಲಿ ಶಾಸಕರ ಪೈಕಿ 4 ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಕೇಂದ್ರ ಚುನಾವಣಾ ಸಮಿತಿ ಸಮ್ಮತಿಸಿದರೆ 135 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು. ಮೊದಲ ಹಂತದಲ್ಲೇ 135 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಳಿದ 89 ಕ್ಷೇತ್ರಗಳಿಗೆ ತಲಾ ಇಬ್ಬರ ಹೆಸರು ಶಿಫಾರಸು ಮಾಡಲಾಗಿದೆ. ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳೊಂದಿಗೆ ಸಂಧಾನ ನಡೆಸಲಾಗುವುದು. ಸಿಎಲ್ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕಾಂಕ್ಷಿಗಳೊಂದಿಗೆ ಸಂಧಾನ ನಡೆಸಲಿದ್ದಾರೆ. 10ರಿಂದ 12 ಕ್ಷೇತ್ರಗಳಲ್ಲಿ ಈಗಾಗಲೇ ಸಂಧಾನ ನಡೆಸುವಲ್ಲಿ ನಾಯಕರು ಯಶಸ್ವಿಯಾಗಿದ್ದಾರೆ. ಸಮಸ್ಯೆ ಪರಿಹಾರಕ್ಕೆ ರಾಜ್ಯ ನಾಯಕರು ಹೈಕಮಾಂಡ್ ಮೊರೆ ಹೋಗಿದ್ದಾರೆ. ಹೈಕಮಾಂಡ್ ಜೊತೆಗಿನ ಸಭೆಯ ವೇಳೆ ಕೆಲವು ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular