HomeKarnatakaBIG NEWS: ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ

BIG NEWS: ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದ ನಡುವೆಯೇ ವರುಣನ ಸಿಂಚನವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಕೂಡ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular