BIG NEWS: ತಮ್ಮ ಹೇಳಿಕೆಗೆ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕ್ಷಮೆ ಯಾಚಿಸಿದ ಶಾಸಕ ಹ್ಯಾರಿಸ್

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಕರೆದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತಮ್ಮ ಹೇಳಿಕೆಗೆ ಶಾಸಕ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರಿನ ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಶಾಸಕ ಹ್ಯಾರಿಸ್ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬೆಂಗಳೂರು ಕರಗ ನಾಟಕ ಎಂದು ಹ್ಯಾರಿಸ್ ಹೇಳಿದ್ದರು. ಹ್ಯಾರಿಸ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ನೇರವಾಗಿ ದೇಗುಲಕ್ಕೆ ಬಂದು ಕ್ಷಮೆಯಾಚಿಸಿದ್ದಾರೆ.

ಈ ವೇಳೆ ಮಾತನಾಡಿದ ಹ್ಯಾರಿಸ್, ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ. ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಾನು ಕ್ಷಮೆ ಕೋರಿದ್ದೇನೆ. ಪ್ರತಿವರ್ಷವೂ ಬೆಂಗಳೂರು ಕರಗ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read