ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಗಿಫ್ಟ್ ಸಿಕ್ಕಿದೆ. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರಕ್ಕೆ ಕೆ ಎಸ್ ಆರ್ ಟಿ ಸಿ ಕೊನೆಗೂ ಅನುಮತಿ ನೀಡಿದೆ.
ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಸಿ ಬಸ್ ಸಂಚಾರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದು, ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಬಿಡಲು ಮುಂದಾಗುತ್ತಿದ್ದಂತೆ ಕೆ ಎಸ್ ಆರ್ ಟಿ ಸಿ ಆಕ್ಷೇಪ ವಕ್ತಪಡಿಸಿತ್ತು.