HomeKarnatakaBIG NEWS: ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿ ಭೇಟಿ; ಟಿಕೆಟ್ ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿ ಭೇಟಿ; ಟಿಕೆಟ್ ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಈಗಾಗಲೇ ಹಲವು ಸುತ್ತಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಇದರ ಮಧ್ಯೆ ಟಿಕೆಟ್ ನೀಡುವ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, ಇಂದು ಮೊದಲ ಪಟ್ಟಿ ಸಿದ್ಧವಾಗುವ ನಿರೀಕ್ಷೆ ಇದೆ.

ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ನವದೆಹಲಿ ತಲುಪಿದ್ದು, ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಸೇರಿದಂತೆ ಇತರೆ ನಾಯಕರು ಆಗಮಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಹಲವು ಟಿಕೆಟ್ ಆಕಾಂಕ್ಷಿಗಳು ಸಹ ನವದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಗಾಗಿ ಲಾಬಿ ಆರಂಭಿಸುತ್ತಿದ್ದಾರೆ.

ಮೊದಲ ಪಟ್ಟಿಯಲ್ಲಿ ಯಾವುದೇ ಗೊಂದಲಗಳಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎನ್ನಲಾಗಿದ್ದು, ಇಂದು ನಡೆಯುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಪಟ್ಟಿ ಅಂತಿಮವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular