HomeKarnatakaBIG NEWS: ಇಂದೇ ಘೋಷಣೆಯಾಗಲಿದೆಯಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ....? ಗೆಲ್ಲುವ ಕಡೆ ಮಹಿಳೆಯರು, ಯುವಕರಿಗೂ ಟಿಕೆಟ್...

BIG NEWS: ಇಂದೇ ಘೋಷಣೆಯಾಗಲಿದೆಯಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ….? ಗೆಲ್ಲುವ ಕಡೆ ಮಹಿಳೆಯರು, ಯುವಕರಿಗೂ ಟಿಕೆಟ್ ಎಂದ ಡಿ,ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ಇಂದು ಸಂಜೆಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ.

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಹೆಸರು ಫೈನಲ್ ಆಗಲಿದೆ. ಈ ಹಿನ್ನೆಲೆಯಲ್ಲಿ ಇಂದೇ ಅಭ್ಯರ್ಥಿಗಳ ಹೆಸರು ಘೋಷಣೆಯಾದರೂ ಅಚ್ಚರಿಯಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮಧ್ಯೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಒತ್ತಡವೂ ಇಲ್ಲ. ಯಾರೆಲ್ಲ ಅಭ್ಯರ್ಥಿಗಳು ಶ್ರಮಿಸಿದ್ದಾರೆ ಎಂಬುದು ಗೊತ್ತಿದೆ. ಕಳೆದ ಮೂರು ವರ್ಷಗಳಿಂದ ಅಭ್ಯರ್ಥಿಗಳ ಶ್ರಮದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದೇವೆ. ಸಿಇಸಿ ಜತೆ 5-6 ಬಾರಿ ಸಭೆ ನಡೆಸಿದ್ದೇವೆ. 8-10 ಬಾರಿ ಸರ್ವೆ ಆಗಿದೆ. ಈ ಎಲ್ಲದರ ಬಗ್ಗೆಯೂ ಕಾಂಗ್ರೆಸ್ ಕೇಂದ್ರ ಚುನಾವಣೆ ಸಮಿತಿಯಲ್ಲಿ ಚರ್ಚೆಯಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ಸಮಿತಿ ನಾಯಕರ ಜೊತೆ ಚರ್ಚಿಸುತ್ತೇವೆ ಎಂದರು.

ಗೆಲ್ಲುವ ಅವಕಾಶ ಇರುವ ಕಡೆ ಯುವಕರು, ಮಹಿಳೆಯರಿಗೂ ಟಿಕೆಟ್ ನಿಡಲಾಗುತ್ತಿದೆ. ಬಹುತೇಕ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular